ಕುಟಜ ಘನವಟಿ (ಮಾತ್ರೆಗಳು)
ಅ. ಗುಣಧರ್ಮ ಮತ್ತು ಆಗಬಹದಾದ ಉಪಯೋಗ
ಈ ಔಷಧವು ಶರೀರದಲ್ಲಿರುವ ಅತಿಸಾರ (ಭೇದಿ) ನಾಶಕವಾಗಿದೆ. ರೋಗಗಳಲ್ಲಿನ ಇದರ ಉಪಯೋಗವನ್ನು ಮುಂದೆ ಕೊಡಲಾಗಿದೆ; ಆದರೆ ಪ್ರಕೃತಿ, ಪ್ರದೇಶ, ಋತು ಮತ್ತು ವ್ಯಕ್ತಿಗಿರುವ ಇತರ ರೋಗಗಳಿಗನುಸಾರ ಉಪಚಾರದಲ್ಲಿ ಬದಲಾವಣೆ ಆಗಬಹುದು. ಆದ್ದರಿಂದ ಔಷಧಿಯನ್ನು ವೈದ್ಯರ ಸಲಹೆಗನುಸಾರವೇ ತೆಗೆದುಕೊಳ್ಳಬೇಕು.
ಉಪಯೋಗ | ಔಷಧಿಯನ್ನು ಸೇವಿಸುವ ಪದ್ಧತಿ | ಅವಧಿ |
---|---|---|
ಅತಿಸಾರ (ಭೇದಿ), ಪದೇ ಪದೇ ಶೌಚವಾಗುವುದು | ದಿನದಲ್ಲಿ 3-4 ಬಾರಿ 2 ರಿಂದ 4 ಮಾತ್ರೆಗಳನ್ನು ಒಂದು ಬಟ್ಟಲು ಬೆಚ್ಚಗಿನ ನೀರಿನೊಂದಿಗೆ ಸೇವಿಸಬೇಕು. | 1 – 2 ದಿನ |
ಮೂಲವ್ಯಾಧಿಯಿಂದ ರಕ್ತ ಬರುವುದು, ಯೋನಿ ಮಾರ್ಗದಿಂದ ಹೆಚ್ಚಿನ ರಕ್ತಸ್ರಾವವಾಗುವುದು (ರಕ್ತಪ್ರದರ) | ದಿನದಲ್ಲಿ 2-3 ಬಾರಿ 2-4 ಮಾತ್ರೆಗಳನ್ನು ಒಂದು ಬಟ್ಟಲು ಬೆಚ್ಚಗಿನ ನೀರಿನೊಂದಿಗೆ ಸೇವಿಸಬೇಕು. | 1 ತಿಂಗಳು |
ಆ. ಸೂಚನೆ
1. 8 ರಿಂದ 14 ವಯಸ್ಸಿನ ಮಕ್ಕಳು ಹಿರಿಯರ ಅರ್ಧ ಪ್ರಮಾಣದಲ್ಲಿ ಮತ್ತು 3 ರಿಂದ 7 ವಯಸ್ಸಿನ ಮಕ್ಕಳು ಹಿರಿಯರ ಕಾಲು ಪ್ರಮಾಣದಲ್ಲಿ ಔಷಧಿಯ ಚೂರ್ಣವನ್ನು ತೆಗೆದುಕೊಳ್ಳಬೇಕು.
2. ಮಾತ್ರೆಗಳನ್ನು ಜಗಿದು ಅಥವಾ ಚೂರ್ಣ ಮಾಡಿ ಸೇವಿಸಿದರೆ ಅದರ ಪರಿಣಾಮ ಹೆಚ್ಚಾಗುವುದು.
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (11.6.2021)